Wednesday, June 7, 2023

Latest Posts

ಕಂಠೀರವ ಕ್ರೀಡಾಂಗಣದ ಬಳಿ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ವ್ಯವಸ್ಥೆ ಮಾಡಿದ್ದು, ಕಾರ್ಯಕ್ರಮಕ್ಕೆ ಜನರೇ ದಂಡೇ ಆಗಮಿಸುತ್ತಿದೆ. ಈ ನಡುವೆ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನಸಂದಣಿಯಿಂದ ಗಲಾಟೆ ಶುರುವಾಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಕ್ರೀಡಾಂಗಣದತ್ತ ಹೆಜ್ಜೆ ಹಾಕಿದ್ದಾರೆ. ಈ ವೇಲೆ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನರಿಂದಾಗು ನೂಕು ನುಗ್ಗಲು ಉಂಟಾಗಿದೆ. ಜನರನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಪೊಲೀಸರು ಲಘು ಲಾಠಿ ಚಾರ್ಜ್‌ ಮಾಡಿದ್ದಾರೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕರ್ತವ್ಯ ನಿರತ ಪೊಲೀಸರಿಗೂ ಗಾಯಗಳಾಗಿವೆ. ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಜನ ಬರುವ ನಿರೀಕ್ಷೆಯಿದ್ದು, ಒಂದು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!