ಹೊಸದಿಗಂತ ಡಿಜಿಟಲ್ ಡೆಸ್ಕ್;
ಮೈಸೂರು ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದ ಕಲ್ಲೆಸತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಿದ್ದಾರೆ.
ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಭಾಗಿಯಾಗಿದ್ದರು.
ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಹಲವು ಖಡಕ್ ಸೂಚನೆ ನೀಡಿದ್ದಾರೆ. ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಅಂತ ಸಿಎಂ ಸೂಚನೆ ನೀಡಿದ್ದಾರೆ.
ಅಮಾಯಕರಿಗೆ ತೊಂದರೆ ಕೊಡಬಾರದು, ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು ಅಂತ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ರು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಅಂತ ಸಿಎಂ ಸಭೆಯಲ್ಲಿ ಖಡಕ್ ಸೂಚನೆ ನೀಡಿದರು.
ಇನ್ನು ಅತ್ತ ಮೈಸೂರಿನಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅವಧಿಗೆ ಮುನ್ನವೇ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗನ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಆರೋಪಿಯನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.