ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: 1,300 ಮಂದಿ ಬಂಧನ, 45 ಸಾವಿರ ಪೊಲೀಸರ ನಿಯೋಜನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫ್ರಾನ್ಸ್‌ನಲ್ಲಿ (France) ಜನಾಕ್ರೋಶ ಭುಗಿಲೆದ್ದಿದ್ದು, 17 ವರ್ಷದ ಹುಡುಗನನ್ನು ಗುಂಡಿಟ್ಟು ಹತ್ಯೆ ಮಾಡಿದ ನಂತರ ಎಲ್ಲೆಡೆ ಪ್ರತಿಭಟನೆ ತ್ರೀವತೆ ಪಡೆದಿದೆ.

ಇದೀಗ ಫ್ರಾನ್ಸ್‌ನ ಪ್ರತಿಭಟನೆ ಶನಿವಾರ 4ನೇ ದಿನಕ್ಕೆ ಕಾಲಿಟ್ಟಿದ್ದು, ಬೀದಿ ಬೀದಿಗಳಲ್ಲಿ ಪೊಲೀಸ್‌ (France Police) ಬ್ಯಾರಿಕೇಡ್‌ಗಳನ್ನು ಮುರಿದು ಹಾಕಿ, ಸಿಕ್ಕ ಸಿಕ್ಕ ವಾಹನಗಳಿಗೆ ಹಾಗೂ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾಕಾರರ ಆಕ್ರೋಶಕ್ಕೆ 2,000ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿಯಾಗಿವೆ. 500 ಕಟ್ಟಡಗಳು ಧ್ವಂಸಗೊಂಡಿವೆ. ಹಾಗಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಸುಮಾರು 45 ಸಾವಿರ ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ. ಈವರೆಗೆ ಸುಮಾರು 1,311 ಮಂದಿಯನ್ನು ಬಂಧಿಸಲಾಗಿದೆ.

ಫ್ರಾನ್ಸ್‌ನ ಪಶ್ಚಿಮ ಪ್ಯಾರಿಸ್‌ನ ನಾಂಟೇರ್‌ನಲ್ಲಿ ಟ್ರಾಫಿಕ್‌ ತಪಾಸಣೆ ವೇಳೆ ಪೊಲೀಸರು 17 ವರ್ಷದ ನಹೆಲ್ ಎಂಬ ಹುಡುಗನನ್ನ ಗುಂಡಿಟ್ಟು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿರುವುದರಿಂದ ಶೀಘ್ರವೇ ಶಮನಗೊಳಿಸಲು ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!