ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 28,903 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ಮಂಗಳವಾರ ಪತ್ತೆಯಾದ ಸೋಂಕಿತರ ಸಂಖ್ಯೆ ಬಳಿಕ ದೇಶದಲ್ಲಿನ ಸೋಂಕಿತರ ಸಂಖ್ಯೆ 1,14,38,734ಕ್ಕೆ ಏರಿಕೆಯಾಗಿದ್ದು, ಇದರ ಪೈಕಿ 2,34,406 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ 17,741 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,10,45,284ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 188 ಮಂದಿ ಕೊರೋನಾಗೆ ಮೃತಪಟ್ಟಿದ್ದು, ಈವರೆಗೂ ಒಟ್ಟು 1,59,044 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.