ಒಟಿಟಿ ಬಿಡುಗಡೆಗೆ ಸಜ್ಜಾದ ಕಾಂತಾರ: ಯಾವಾಗ ರಿಲೀಸ್? ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಚಿತ್ರವು 2022 ರ ದೊಡ್ಡ ಬ್ಲಾಕ್‌ ಬಸ್ಟರ್ ಹಿಟ್ ಚಿತ್ರ ಎನಿಸಿಕೊಂಡಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತಗಳನ್ನು ಸಾಧಿಸಿ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳಲ್ಲಿ ಒಂದಾಗಿದೆ. ಮೊದಲಿಗೆ ಕನ್ನಡದಲ್ಲಿ ಬಿಡುಗಡೆಗಿದ್ದ ಚಿತ್ರಕ್ಕೆ ಜನರ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೋಡಿ ಕಾಂತಾರ ನಿರ್ಮಾಪಕರು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಚಲನಚಿತ್ರವನ್ನು ಬಿಡುಗಡೆ ಮಾಡಿದರು. ಬಿಡುಗಡೆಯಾದ ಎಲ್ಲೆಡೆಯೂ ಪ್ರಚಂಡ ಯಶಸ್ಸು ಸಾಧಿಸಿದ ಕಾಂತಾರ ಚಿತ್ರಕ್ಕೆ ಒಟಿಟಿ ಯಲ್ಲೂ ಭರ್ಜರಿ ಡಿಮ್ಯಾಂಡ್‌ ಇದೆ. ಕಳೆದ ಕೆಲವು ದಿನಗಳಿಂದ ಕಾಂತಾರ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗುತ್ತಿತ್ತು. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು. ಆದರೆ ಕಾಂತಾರ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದರಿಂದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿತ್ತು. ಇದೀಗ, ಕಾಂತಾರ ಒಟಿಟಿ ಬಿಡುಗಡೆ ದಿನಾಂಕವನ್ನು ನಿರ್ಮಾಣ ಸಂಸ್ಥೆ ಅಂತಿಮಗೊಳಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಕಾಂತಾರ ಮುಂದಿನ ವಾರ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗುವ ಸಾಧ್ಯತೆಯಿದೆ. ಮಾಧ್ಯಮಗಳ ವರದಿಯ ಪ್ರಕಾರ ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಲಿದೆ. ಆದರೆ, ನಿರ್ಮಾಪಕರಿಂದ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!