ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ವಿದೇಶಗಳಲ್ಲಿ ‘ಕಾಂತಾರ’ ಸಿನಿಮಾವು ದೊಡ್ಡ ಕ್ರಾಂತಿ ಸೃಷ್ಟಿ ಮಾಡಿದೆ. ಇದರ ನಡುವೆ ನಟ ರಿಷಬ್ ಶೆಟ್ಟಿ, ಕ್ವಿಜ್ ಶೋ ಕೌನ್ ಬನೇಗಾ ಕರೋಡ್‌ಪತಿಗೆ ಆಗಮಿಸಿದ್ದಾರೆ.
ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ ಈ ಶೋನ ನಿರೂಪಕರು. ಈ ಶೋನಲ್ಲಿ ರಿಷಬ್ ಶೆಟ್ಟಿ ಅವರು ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ.
ಇಂದು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂಭ್ರಮದಂದು ಅಮಿತಾಬ್ ಬಚ್ಚನ್ ಅವರಿಗೆ ಹೊಂಬಾಳೆ ಫಿಲ್ಮ್ಸ್ ಟೀಂ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಕೌನ್ ಬನೇಗಾ ಕರೋಡ್ ಪತಿ ವಿಶೇಷ ಸಂಚಿಕೆಯಲ್ಲಿ ರಿಷಭ್ ಶೆಟ್ಟಿ ಭಾಗಿಯಾಗಿದ್ದಾರೆ. ರಿಷಭ್ ಶೆಟ್ಟಿ ಮತ್ತು ಅಮಿತಾಬ್ ಬಚ್ಚನ್ ನಡುವಿನ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ.
ಕೌನ್ ಬನೇಗಾ ಕರೋಡ್ ಪತಿ ಎಪಿಸೋಡ್ ಗಳಲ್ಲಿ ಆಗ್ಗಾಗ್ಗೆ ಸಾಧಕರನ್ನು ಕರೆಸಿ ಅತಿಥಿಗಳಾಗಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತಿದೆ. ಈಗ ಕಾಂತಾರದ ಬಿಗ್ ಸಕ್ಸಸ್‌ನ ರೂವಾರಿ ನಟ, ನಿರ್ದೇಶಕ ರಿಷಭ್ ಶೆಟ್ಟಿಗೆ ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ.