ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ 115 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಈ ಮೂಲಕ ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರನಾಗಿ ರಿಷಬ್ ಪಂತ್ ಹೊರಹೊಮ್ಮಿದ್ದಾರೆ.
1,10 ಲಕ್ಷ ಪ್ರೇಕ್ಷಕರು ಕೂರುವ ಸಾಮರ್ಥ್ಯವೊಂದಿರುವ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವಿನ 3ನೇ ಟೆಸ್ಟ್ ಪಂದ್ಯ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಇದೀಗ ಕ್ರೀಡಾಂಗಣದಲ್ಲಿ ಎರಡನೇ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ೯೨ ಓವರ್ ಮುಕ್ತಾಯಕ್ಕೆ 2೯೪ ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿದೆ.