ರಿಷಭ್​ ಪಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಅನುಪಮ್ ಖೇರ್, ಅನಿಲ್ ಕಪೂರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್​ ಇಂಡಿಯಾ ಆಟಗಾರ ರಿಷಭ್​ ಪಂತ್ಅವರನ್ನು ಬಾಲಿವುಡ್​ನ ಹಿರಿಯ ನಟರಾದ ಅನುಪಮ್ ಖೇರ್ ಮತ್ತು ಅನಿಲ್ ಕಪೂರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಪಂತ್​ ಭೇಟಿ ಬಳಿಕ ಮಾತನಾಡಿದ ಅನಿಲ್ ಕಪೂರ್, ರಿಷಭ್​ ಪಂತ್​ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ಅವರು ಮತ್ತೆ ಕ್ರಿಕೆಟ್​ ಅಂಗಳಕ್ಕೆ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಅಪಘಾತದ ಪೋಟೊಗಳನ್ನು ಕಂಡು ನಾನು ಗಾಬರಿಯಾದೆ. ಅದೃಷ್ಟವಶಾತ್ ಪಂತ್​ ಜೀವಾಪಾಯದಿಂದ ಪಾರಾಗಿದ್ದಾರೆ. ಎಲ್ಲ ದೇವರ ಆಶೀರ್ವಾದ. ಆದ್ದರಿಂದ ದೊಡ್ಡ ಅವಘಟ ತಪ್ಪಿಹೋಗಿದೆ. ಸದ್ಯ ಪಂತ್​ ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಅನುಪಮ್ ಖೇರ್ ಹೇಳಿದ್ದಾರೆ.

ಶುಕ್ರವಾರ ಉತ್ತರಾಖಂಡದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಪಂತ್​ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!