Wednesday, August 17, 2022

Latest Posts

ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಕ್ರಿಕೆಟಿಗ ರಿಷಬ್ ಪಂತ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಗುರುವಾರ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ತಾವು ಲಸಿಕೆ ಪಡೆದಿರುವ ಪೋಟೋವನ್ನು ಟ್ವಿಟರ್ ನಲ್ಲಿ ರಿಷಬ್ ಶೇರ್ ಮಾಡಿ, ” ತಾನು ಇವತ್ತು ಮೊದಲ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದೇನೆ. ಯಾರೆಲ್ಲ ಲಸಿಕೆ ಪಡೆಯಲು ಅರ್ಹರಿದ್ದಿರೋ ಅವರೆಲ್ಲ ದಯವಿಟ್ಟು ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ,  ಚೇತೇಶ್ವರ್ ಪೂಜಾರ, ಉಮೇಶ್ ಯಾದವ್ ಸೇರಿದಂತೆ ಅನೇಕರು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!