ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ರ ಕುರಿತು ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಸಿನಿಮಾದಲ್ಲಿ ಕಳರಿಪಯಟ್ಟು ಕಲಿಯುತ್ತಿರುವ ಲುಕ್‌ನಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ರಿಷಬ್ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ರಿಷಬ್ ಕಳರಿಪಯಟ್ಟು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಪಾತ್ರಕ್ಕಾಗಿ ಸಕಲ ತಯಾರಿ ಮಾಡಿಕೊಳ್ತಿದ್ದಾರೆ ಎನ್ನಲಾಗಿತ್ತು. ಈಗ ಚಿತ್ರದಲ್ಲಿನ ಕಳರಿಪಯಟ್ಟು ಕಲಿಕೆಯಲ್ಲಿ ನಿರತರಾಗಿರುವ ಲುಕ್ ಅನಾವರಣ ಆಗಿದೆ. ಇದರಿಂದ ಅಭಿಮಾನಿಗಳಿಗೆ ಚಿತ್ರದ ಮೇಲಿನ ನಿರೀಕ್ಷೆ ಡಬಲ್ ಆಗಿದೆ.