ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ಶಾರುಖ್ ಖಾನ್ ಸಿನಿಮಾ ಮಾಡುತ್ತಿದ್ದು, ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು.
ಯಾವ ಭಾಷೆಯ ಸಿನಿಮಾ ಕೂಡ ಮಾಡೋದಿಲ್ಲ, ಬರೀ ಕನ್ನಡ ಸಿನಿಮಾ ಮಾಡ್ತೇನೆ ಎಂದು ರಿಷಬ್ ಶೆಟ್ಟಿ ಈ ಹಿಂದೆ ಹೇಳಿದ್ದರು. ಹಾಗಿದ್ದೂ ಹಿಂದಿ ಸಿನಿಮಾ ಹೇಗೆ ಮಾಡ್ತಿದ್ದಾರೆ ಎಂದು ಅಭಿಮಾನಿಗಳು ಆಲೋಚಿಸುತ್ತಿದ್ದರು.
ಇದೀಗ ಈ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಸಿನಿಮಾ ಒಪ್ಪಿಗೆಯಾಗಿದೆ ಎಂದರೆ ಅಧಿಕೃತ ಮಾಹಿತಿ ಹೊರಬೀಳುವವರೆಗೂ ಕಾಯಬೇಕಿದೆ. ನಾನು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾ ಮಾಡುತ್ತಿಲ್ಲ. ಹೊಂಬಾಳೆ ಶಾರುಖ್ ಅವರ ಜೊತೆ ಹೊಸ ಸಿನಿಮಾ ಮಾಡುತ್ತಿದ್ದರೆ ಇಷ್ಟೊತ್ತಿಗಾಗಲೇ ಅವರೇ ಅನೌನ್ಸ್ ಮಾಡುತ್ತಿದ್ದರು ಎಂದು ಹೇಳಿದ್ದಾರೆ.