ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ಆಹ್ವಾನ ಬಂದಿದೆಯೇ?
ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ.ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಲಾಗಿದ್ದು, ಇವುಗಳ ಪೈಕಿ ರಿಷಬ್‌ಗೂ ಆಹ್ವಾನ ಬಂದಿದೆ ಎನ್ನಲಾಗಿದೆ. ಈಗಾಗಲೇ ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ