ರಿಷಬ್‌ ಶೆಟ್ಟಿಗೆ ಒಲಿದು ಬಂದ ಬಾಲಿವುಡ್ ಲೈಫ್ ಅವಾರ್ಡ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ (dada saheb phalke award 2023) ಪ್ರಶಸ್ತಿ ಪಡೆದ ಬೆನ್ನಲ್ಲೇ ಬಾಲಿವುಡ್ ಲೈಫ್ ಅವಾರ್ಡ್ಸ್‌ನ (BLAwards2023) (BLAwards) ದಕ್ಷಿಣ ಸಿನಿಮಾ ವಿಭಾಗದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಈಗಾಗಲೇ ರಿಷಬ್‌ ಕಾಂತಾರ-2ಗೆ ಭರ್ಜರಿ ಪ್ಲಾನ್ ಮಾಡಿ ಬರವಣಿಗೆ ಆರಂಭಿಸಿದ್ದಾರೆ . 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

ಕಾಂತಾರ-1ರಲ್ಲಿ ನಾಯಕ ಶಿವ ಮತ್ತು ಅವರ ತಂದೆಯಾಗಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತೂಮಿನಾಡ್, ನವೀನ್ ಡಿ ಪಡೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!