ಬ್ರಿಟನ್ ಮುಂದಿನ ಪ್ರಧಾನಿ ಇನ್ಫೋಸಿಸ್ ಮೂರ್ತಿ ಅಳಿಯ ರಿಷಿ ಸುನಕ್​?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬ್ರಿಟನ್​ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ ಹೊಸ ಪ್ರಧಾನಿ ಆಯ್ಕೆಯ ಕಸರತ್ತು ಆರಂಭವಾಗಿದೆ. ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್​ ಮುಂದಿನ ಪ್ರಧಾನಿ ಎಂಬ ಮಾತು ಕೇಳಿಬರುತ್ತಿದೆ.
ಸಚಿವರ ಸರಣಿ ರಾಜೀನಾಮೆಗಳಿಂದ ಕಂಗೆಟ್ಟಿರುವ ಬೋರಿಸ್ ಜಾನ್ಸನ್ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಮೊನ್ನೆಮಂಗಳವಾರ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಮತ್ತು ಆರೋಗ್ಯ ಸಚಿವ ಸಾಜಿದ್ ಜಾವಿದ್ ರಾಜೀನಾಮೆ ನೀಡಿದ್ದರು. ಬುಧವಾರವೂ ಸಚಿವರ ರಾಜೀನಾಮೆ ಸರಣಿ ಮುಂದುವರಿದಿತ್ತು. ಸುನಾಕ್ ಬದಲಿಗೆ ಹಣಕಾಸು ಸಚಿವರಾಗಿ ನೇಮಕಗೊಂಡ ನದೀಮ್ ಜಹಾವಿ ಕೂಡ ೪೮ ಗಂಟೆಯೊಳಗೆ ರಾಜೀನಾಮೆ ನೀಡಿದ್ದರು. ಇದು ಪ್ರಧಾನಿ ಬೋರಿಸ್ ಮೇಲೆ ಒತ್ತಡ ಹೆಚ್ಚಿಸಿತ್ತು.
ಹೀಗಾಗಿ ಬೋರಿಸ್ ರಾಜೀನಾಮೆಯೊಂದಿಗೆ ಬ್ರಿಟನ್‌ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವವರು ಯಾರು ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.
ಇದರಲ್ಲಿ ರಿಷಿ ಸುನಕ್​ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಅಲ್ಲದೇ, ಸುನಕ್​ ನಂತರ ಹಣಕಾಸು ಸಚಿವರಾಗಿ ನೇಮಕಗೊಂಡಿದ್ದ ನದೀಮ್ ಹೆಸರು ಕೂಡ ಪ್ರಧಾನಿ ಹುದ್ದೆಯ ಮುಂಚೂಣಿಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!