ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪತ್ನಿಯೊಂದಿಗೆ ದೇವಸ್ಥಾನಕ್ಕೆ ತೆರಳಿದ ರಿಷಿ ಸುನಕ್..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಕೃಷ್ಣಜನ್ಮಾಷ್ಟಮಿ, ಜಗತ್ತಿನಾದ್ಯಂತ ಹಿಂದೂಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ದೇವಸ್ಥಾನಗಳಲ್ಲಿ ವಿಜೃಂಭಣೆಯಿಂದ ಉತ್ಸವ, ಆರಾಧನೆ, ವಿವಿಧ ಪೂಜೆ, ಪುಟ್ಟ ಮಕ್ಕಳಿಗೆ ರಾಧೆ-ಕೃಷ್ಣೆಯ ವೇಷ ಹೀಗೆ ಭಿನ್ನವಾಗಿ ಹಬ್ಬ ಆಚರಿಸುತ್ತಾರೆ.  ಬ್ರಿಟನ್ ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ, ಭಾರತ ಮೂಲದ ರಿಷಿ ಸುನಕ್ ಅವರು ಲಂಡನ್‌ನ ಭಕ್ತಿವೇದಾಂತ ಮೇನರ್ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಈ ಕುರಿತು ಟ್ವೀಟ್ ಮಾಡಿರುವ ಅವರು,  ಇಂದು ನಾನು ನನ್ನ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಕ್ತಿವೇದಾಂತ ಮೇನರ್ ದೇವಸ್ಥಾನಕ್ಕೆ ಭೇಟಿ ನೀಡಿ ಜನ್ಮಾಷ್ಟಮಿ ಆಚರಣೆಯಲ್ಲಿ ಪಾಲ್ಗೊಂಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಮ್ಮ ಫೋಟೋವನ್ನೂ ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಬ್ರಿಟನ್ ಪ್ರಧಾನಿ ರೇಸ್ ನಲ್ಲಿ ಲಿಜ್ ಟ್ರಸ್ ಗೆ ರಿಷಿ ಸುನಕ್ ತೀವ್ರ ಪೈಪೋಟಿ ನೀಡುತ್ತಿರುವುದು ಗೊತ್ತೇ ಇದೆ. ಆದಾಗ್ಯೂ, ರಿಷಿ ಸುನಕ್ ಲಿಜ್ ಟ್ರಸ್ಗಿಂತ ಹಿಂದುಳಿದಿರುವುದಾಗಿ ಇತ್ತೀಚಿನ ಸಮೀಕ್ಷೆಯು ಬಹಿರಂಗಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!