ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಬೆನ್ನಿಗೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ವ್ಯಾಪಕ ಮುನ್ನೆಚ್ಚರಿಕಾ ಕ್ರಮ ಕೈಗೆತ್ತಿಕೊಂಡಿದೆ.
ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆ.ಸಿ ಜನರಲ್ ಆಸ್ಪತ್ರೆಗೆ ಮದು ಖುದ್ದು ಭೇಟಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಆಕ್ಸಿಜನ್ ಸಿಲಿಂಡರ್, ತುರ್ತು ಐಸಿಯು ಬೆಡ್ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ, ವೆಂಟಿಲೆಟರ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಕೋವಿಡ್ ಸಂಬಂಧಿಸಿದ ಉಪಕರಣಗಳು ಹಾಗೂ ಅವುಗಳ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸಿದ ಅವರು, ಅಲ್ಲಿನ ಆಡಳಿತ ಹಾಗೂ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.