ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಎರಡನೇ ಅಲೆ ಅಪಾಯದ ಮುನ್ಸೂಚನೆ ನೀಡಿದೆ.
ಶುಕ್ರವಾರ 256 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಜನರು ಕೋವಿಡ್ ನಿಯಮಾವಳಿ ಪಾಲಿಸಲೇಬೇಕಾದ ಎಚ್ಚರಿಕೆ ರವಾನೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1500ರ ಸನಿಹ ಬಂದು ನಿಂತಿದೆ.
ಶುಕ್ರವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. 92 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 37562 ಕ್ಕೆ ಏರಿಕೆಯಾಗಿದೆ. ಈ ಪೈಕಿ 1414 ಸಕ್ರಿಯ ಪ್ರಕರಣಗಳು. 35405 ಮಂದಿ ಗುಣಮುಖರಾಗಿದ್ದಾರೆ. 743 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 45925 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 4769030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.