Monday, August 8, 2022

Latest Posts

ಅಗತ್ಯ ವಸ್ತುಗಳ ಬೆಲೆ ಏರಿಕೆ: ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮಂಡ್ಯ:

ಇಂಧನ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳೇ ಕಾರಣ. ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ ಜನಸಾಮಾನ್ಯರು ಬದುಕುವುದಾದರೂ ಹೇಗೆ?. ವರ್ಷಕ್ಕೆ 2 ಲಕ್ಷ ಉದ್ಯೋಗ ಸೃಷ್ಠಿ ಮಾಡುತ್ತೇವೆಂದು ಕೊಟ್ಟಿದ್ದ ಭರವಸೆ ಏನಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು ಇದೀಗ ಅವರ ಬದುಕನ್ನೇ ಮೂರಾಬಟ್ಟೆ ಮಾಡುತ್ತಿದ್ದೀರಿ. ಇನ್ನಾದರೂ ತಪ್ಪನ್ನು ಸರಿಪಡಿಸಿ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇದರೊಂದಿಗೆ ಜನರನ್ನು ಬದುಕಲು ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಅಸಮಾಧಾಮ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಯೋಗಣ್ಣ, ವಿನಯ್, ರವೀಂದ್ರ, ಮಾಲತಿ, ಅರುಣ್, ಬೋರೇಗೌಡ, ಶಿವಕುಮಾರ್ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss