ಬಿಸಿಲಿನ ತಾಪಮಾನ ಹೆಚ್ಚಳ: ರಾಜ್ಯದ ಈ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು,ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.

ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!