ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್ ನಲ್ಲಿ 18 ವ್ಯವಸ್ಥಾಪಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 1,2023ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.