ರಿತು ಖಂಡೂರಿ ಭೂಷಣ್​​ ಉತ್ತರಾಖಂಡ್ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಉತ್ತರಾಖಂಡ್ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಿತು ಖಂಡೂರಿ ಭೂಷಣ್​​ ನೇಮಕವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಿತು ಖಂಡೂರಿ ಅವರು ರಾಜ್ಯ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು,ಇವರು ಉತ್ತರಾಖಂಡದ ಕೋಟ್‌ದ್ವಾರ ವಿಧಾನಸಭೆ ಕ್ಷೇತ್ರದ ಶಾಸಕಿಯಾಗಿದ್ದರು.
ಉತ್ತರಾಖಂಡ್​ ವಿಧಾನಸಭೆ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ರಿತು, ಬಿಜೆಪಿ ಸದಸ್ಯರು ಮತ್ತು ಪ್ರತಿಪಕ್ಷಗಳ ನಾಯಕರಿಗೆ ನನ್ನ ಧನ್ಯವಾದಗಳು. ಸಂಸದೀಯ ಸಂಪ್ರದಾಯ ಮತ್ತು ಪರಿಕಲ್ಪನೆಗಳನ್ನು ಪೂರೈಸಲು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಿತು ಖಂಡೂರಿ ಯಾರು:
ಉತ್ತರಾಖಂಡ್ ನ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಪುತ್ರಿ ರಿತು ಖಂಡೂರಿ. ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದ ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಕೋಟ್ವಾರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಂದ್ರ ಸಿಂಗ್ ನೇಗಿಯನ್ನು 3,687 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.
ರಿತು ಖಂಡೂರಿ 2017ರಲ್ಲಿ ಯಮಕೇಶ್ವರ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು. ರಿತು ಅವರು ಉತ್ತರಾಖಂಡ್ ನ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದಾರೆ.
ರಿತು ಖಂಡೂರಿ ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದ ಮಾಜಿ ಉಪನ್ಯಾಸಕಿಯಾಗಿದ್ದು, ಇವರು ಐಎಎಸ್ ಅಧಿಕಾರಿ ರಾಜೇಶ್ ಭೂಷಣ್ ಅವರನ್ನು ವಿವಾಹವಾಗಿದ್ದರು. ರಾಜೇಶ್ ಭೂಷಣ್ ಕೇಂದ್ರ ಆರೋಗ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!