ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಮಂಡ್ಯ :
ಆಯತಪ್ಪಿ ಬೈಕ್ ನಾಲೆಗೆ ಉರುಳಿಬಿದ್ದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಳೇಬೂದನೂರು ಬಳಿ ನಡೆದಿದೆ.
ಬೆಂಗಳೂರಿನ ಮಂಜೇಶ್ಗೌಡ (28) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಈತ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಮುಂಜಾನೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಬಿದ್ದಿದ್ದು, ಘಟನೆಯಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಬೆಳಗ್ಗೆ 8.30ರ ಸಮಯದಲ್ಲಿ ನಾಲೆ ಕಡೆಗೆ ಬಂದ ಗ್ರಾಮಸ್ಥರು ನಾಲೆಯಲ್ಲಿ ಬೈಕ್ ಬಿದ್ದಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಬೈಕ್ ಮತ್ತು ಶವವನ್ನು ನಾಲೆಯಿಂದ ಹೊರತೆಗೆದು ಮಿಮ್ಸ್ನ ಶವಾಗಾರಕ್ಕೆ ಸಾಗಿಸಿದ್ದಾರೆ.
ಸುದ್ಧಿ ತಿಳಿದು ಸ್ಥಳಕ್ಕೆ ಇನ್ಸ್ಪೆಕ್ಟರ್ ಆನಂದ್ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.