FOLLOWUP| ಅಪಾಯದ ಮಟ್ಟಕ್ಕಿಂತ ಕೆಳಗಿಳಿದ ಯಮುನಾ ನದಿ ನೀರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬುಧವಾರ ಬೆಳಗ್ಗೆ ಯಮುನಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಕೆಳಗಿಳಿದಿದೆ. ನಿನ್ನೆ ಸಂಜೆ 7 ಗಂಟೆಗೆ 205.35 ಮೀಟರ್‌ನಷ್ಟಿದ್ದು, ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ 205.25 ಮೀಟರ್‌ಗೆ ಇಳಿಕೆ ಕಂಡಿದೆ.

ಹರಿಯಾಣದ ಕೆಲವು ಪ್ರದೇಶಗಳಲ್ಲಿ ಸೋಮವಾರ ಸುರಿದ ಮಳೆಯಿಂದಾಗಿ ನದಿಯ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆಯಾಗಿತ್ತು.
ನದಿಯ ಅಪಾಯದ ಗುರುತು 205.33 ಮೀಟರ್‌ಗಳಷ್ಟಿದೆ. ದೆಹಲಿಯ ಯಮುನಾ ನದಿ ಜುಲೈ 10 ರಂದು ಸಂಜೆ 5 ಗಂಟೆಗೆ ಅಪಾಯದ ಗಡಿ ದಾಟಿತ್ತು.

ಈ ನಡುವೆ ಭಾರತೀಯ ಹವಾಮಾನ ಇಲಾಖೆ, ರಾಷ್ಟ್ರ ರಾಜಧಾನಿ ಪ್ರದೇಶದ ಹಲವಾರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಇತ್ತ ಇನ್ನೂ ಪ್ರವಾಹ ನೀರು ಕಡಿಮೆಯಾಗದೆ ಜನ ಹೈರಾಣಾಗಿದ್ದಾರೆ. ನೀರಿನ ಮಟ್ಟ ಕೊಂಚ ಕಡಿಮೆಯಾಗುತ್ತಿದ್ದಂತೆ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರವು ರಾಷ್ಟ್ರ ರಾಜಧಾನಿಗೆ ಭಾರೀ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ದೆಹಲಿಯ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಕ್ಕಾಗಿ 17 ತಂಡಗಳನ್ನು ನಿಯೋಜಿಸಿದೆ. ಪ್ರವಾಹ ಪೀಡಿತ ತಗ್ಗು ಪ್ರದೇಶಗಳಿಂದ ಜನರನ್ನು ಪರಿಹಾರ ಶಿಬಿರಗಳಿಗ ಸ್ಥಳಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!