ರೇಡಿಯೋ ಮಿರ್ಚಿ ಖ್ಯಾತಿಯ ಆರ್ ಜೆ ರಚನಾ ಹೃದಯಾಘಾತದಿಂದ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರೆಡಿಯೋ ಮಿರ್ಚಿಯಲ್ಲಿ ಹಲವು ವರ್ಷಗಳ ಕಾಲ ರೇಡಿಯೋ ಜಾಕಿಯಾಗಿ ಕೆಲಸ ಮಾಡಿದ್ದ ರಚನಾ(35) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ 7 ವರ್ಷಗಳಿಂದ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಆರ್.‌ಜೆ. ರಚನಾ ಕೊನೆಯುಸಿರೆಳೆದಿದ್ದಾರೆ. ಜೆಪಿ ನಗರದ ಪ್ಲಾಟ್​ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ನಿಧನರಾಗಿದ್ದಾರೆ.
ತಮ್ಮ ಮಾತಿನ ಮೂಲಕ ಜನರ ಮನಸ್ಸು ಗೆದ್ದಿದ್ದ ಚೆಲುವೆ ರಚನಾ ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಕೊಡುತ್ತಿದ್ದರು. ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!