ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ .
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ‘ಭಾರತ ರತ್ನ’ ಪುರಸ್ಕಾರ ಘೋಷಣೆ ಮಾಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ .
ಭಾರತ ರತ್ನ ಪ್ರಶಸ್ತಿಯು ನಮ್ಮ ಕುಟುಂಬ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಇದು ದೇಶದ ಎಲ್ಲ ರೈತರು, ಯುವಕರು ಮತ್ತು ಬಡವರಿಗೆ ಸಂದ ಗೌರವ .ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಅತಿ ಕಡಿಮೆ ಸಮಯದಲ್ಲಿ ಈ ನಿರ್ಧಾರ ಕೈಗೊಳ್ಳಲೇಬೇಕಿತ್ತು ಎಂದು ಹೇಳಿದರು.