ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಾಣವಾಗಿದೆ. ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ.
ಈ ಪಂದ್ಯದಲ್ಲಿ ಬಟ್ಲರ್ ಕೇವಲ 3 ರನ್ ಗಳಿಸಿದರೂ, ಆ ರನ್‌ಗಳೊಂದಿಗೆ 2670 ಎಸೆತಗಳಲ್ಲಿ 4000 ರನ್ ಗಡಿ ದಾಟಿದರು. ಇದರ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎಂಬ ವಿಶ್ವ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿ ಇತ್ತು. ಅವರು 2860 ಎಸೆತಗಳಲ್ಲಿ 4000 ರನ್ ಪೂರೈಸಿದ್ದರು.
ಹೀಗಾಗಿ ಬಟ್ಲರ್ ಅವರ ಈ ಸಾಧನೆ ಭಾರತೀಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯನ್ನು ಮೀರಿಸಿದೆ. ಕಡಿಮೆ ಸಮಯದಲ್ಲಿ ಹೆಚ್ಚು ರನ್ ಗಳಿಸುವ ಸಾಮರ್ಥ್ಯವನ್ನು ಮತ್ತೊಮ್ಮೆ ತೋರಿಸಿದ ಬಟ್ಲರ್, ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಆದ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.



