ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ರಾಮನಗರ:
ಮಾಗಡಿ ರಸ್ತೆ ರಾಯರದೊಡ್ಡಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ.
ರಾಮನಗರ ಟೌನ್ ನ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಘಟನೆ ನಡೆದಿದ್ದು, ರಾಮನಗರ ಬಾಲಗೇರಿ ಅಣ್ಣ ತಮ್ಮಂದಿರಾದ ಮೂರ್ತಿ (23) ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತ ಯುವಕರು.
ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದ್ದಾರೆ. ಮೃತ ಯುವಕರ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.