Sunday, June 26, 2022

Latest Posts

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ಕು ಜನರ ದುರ್ಮರಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕಲಬುರಗಿ:

ನಗರದ ಹೊರವಲಯದ ಕೋಟನೂರ ಬಳಿ ಇಟಿಯೋಸ್​ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ದುರಂತ ಸಂಭವಿಸಿದೆ. ಮೃತರನ್ನು ಉಲ್ಲಾಸ್ (28), ರಾಹುಲ್ (24), ಕಾಶಿ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರೆಲ್ಲರೂ ಕಲಬುರಗಿ ನಿವಾಸಿಗಳಾಗಿದ್ದು, ಜೇವರ್ಗಿ ಮಾರ್ಗದಿಂದ ಕಲಬುರಗಿಗೆ ಕಾರಿನಲ್ಲಿ ಬರುತ್ತಿದ್ದರು. ಆಗ ಎದುರಿಗೆ ಬಂದ ಟ್ಯಾಂಕರ್​ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss