ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಲ್ಲಜರ್ಲ ಮಂಡಲದ ಅನಂತಪಲ್ಲಿ ಉಪನಗರದಲ್ಲಿ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್ ನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ರಾಜಮಹೇಂದ್ರವರಂನ ಪ್ರಕಾಶನಗರಕ್ಕೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಅಪಘಾತದ ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಲ್ಲಿ ಎಂಟು ತಿಂಗಳ ಬಾಲಕನೂ ಸೇರಿದ್ದಾನೆ. ಮೃತರನ್ನು ಸತ್ತಿ ಬಾಬು, ರವಿತೇಜ, ಶ್ರಾವಣಿಕುಮಾರಿ ಮತ್ತು ಅರುಣಾ ಎಂದು ಗುರುತಿಸಲಾಗಿದೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ರಾಜಮಹೇಂದ್ರವರಂ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕೊವ್ವೂರು ಡಿಎಸ್ಪಿ ವರ್ಮಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!