ರಸ್ತೆ ಅಪಘಾತ: ಹೊತ್ತಿ ಉರಿದ ಕಾರು

ಹೊಸದಿಗಂತ ವರದಿ ಅಂಕೋಲಾ:

ಸ್ವಿಪ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ತಾಲೂಕಿನ ಹಾರವಾಡದ ರೈಲ್ವೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಸೋಮವಾರ ಸಂಭವಿಸಿದ್ದು, ಕಾರಿನಲ್ಲಿದ್ದ 5 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ‌.

ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.
ಅಂಕೋಲಾ ಕಡೆ ಸಾಗುತ್ತಿದ್ದ ಈ ಸ್ವಿಪ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!