ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಧ್ಯರಾತ್ರಿ 1:30 ರ ಸುಮಾರಿಗೆ ಔಡಿ ಕ್ಯೂ ಕಾರೊಂದು ಫುಟ್ಪಾತ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು ಮೃತಪಟ್ಟಿದ್ದಾರೆ. ಮೃತರನ್ನು ಇಶಿತಾ, ಧನುಷ್, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್, ಕರುಣಾಸಾಗರ್, ಬಿಂದು ಎಂದು ಗುರುತಿಸಲಾಗಿದೆ.
ಇವರೆಲ್ಲರೂ 20 ವಯಸ್ಸಿನ ಸುಮಾರಿನವರು ಎನ್ನಲಾಗಿದು. ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದಾಗ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಂಚಾರ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.