ಹೊಸ ದಿಗಂತ ವರದಿ, ಕುಶಾಲನಗರ:
ಚಿಕ್ಕಬಳ್ಳಾಪುರದಲ್ಲಿ ನಡೆದ ರಸ್ತೆ ಅವಘಡದಲ್ಲಿ ಕೊಡಗಿನ ಯಡನವಾಡು ಗ್ರಾಮದ ಯುವಕ ಸಾವಿಗೀಡಾದ ಬಗ್ಗೆ ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ನಗರದಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಯಡನವಾಡು ಗ್ರಾಮದ ನಂಜುಂಡ ಎಂಬವರ ಮಗ ವಿಕಾಸ್(19) ಮೃತಪಟ್ಟ ಯುವಕ.
ಚಿಕ್ಕಬಳ್ಳಾಪುರದಲ್ಲಿ ತನ್ನ ಬೈಕ್’ನಲ್ಲಿ ಹೋಗುತ್ತಿದ್ದಾಗ ರಸ್ತೆಯ ವಿಭಜಕಕ್ಕೆ ಅದು ಡಿಕ್ಕಿಯಾಗಿದೆ. ಪರಿಣಾಮವಾಗಿ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದ ವಿಕಾಸ್’ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ