ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಚಿರತೆ ಸಾವು

ದಿಗಂತ ವರದಿ ಚಿತ್ರದುರ್ಗ: 

ತಮಟಕಲ್ ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ತಮಟಕಲ್ ಗ್ರಾಮದ ಬಳಿಯ ಹೊಸ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ರಾತ್ರಿ 8 ಗಂಟೆ ವೇಳೆ ಈ ಘಟನೆ ನಡೆದಿದ್ದು ರಸ್ತೆ ದಾಟುವಾಗ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಬೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಚಿರತೆಯು 2 ವರ್ಷ ಪ್ರಾಯದ್ದು, ಆಡುಮಲ್ಲೇಶ್ವರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟು ಹಾಕಲಾಯಿತು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!