ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವು, ಹೆಚ್‌ಡಿಕೆ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಡರಾತ್ರಿ ಹುಬ್ಬಳ್ಳಿ ತಾರಿಹಾಳ ಬೈಪಾಸ್‌ನಲ್ಲಿ ನಡೆದಿರುವ ರಸ್ತೆ ಅಪಘಾತಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಹೆಚ್‌ಡಿಕೆ,  ʻಹುಬ್ಬಳ್ಳಿ ಹೊರ ವಲಯದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.

ಕಳೆದ ತಡರಾತ್ರಿ ಸಂಭವಿಸಿರುವ ಈ ದುರಂತದಲ್ಲಿ 26 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಅಸುನೀಗಿದ ನತದೃಷ್ಟರೆಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ಆವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ, ಗಾಯಾಳುಗಳೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತ ಸಂಭವಿಸಿದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿಯ ಈ ಜಾಗದಲ್ಲಿ ಪದೇಪದೆ ದುರಂತಗಳು ಸಂಭವಿಸುತ್ತಿವೆ, ಅದು ‘ಸಾವಿನ ಹೆದ್ದಾರಿ’ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಮತ್ತೆ ಅಪಘಾತಗಳು ಸಂಭವಿಸದಂತೆ ತಡೆಯಬೇಕು ಎಂದು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!