Wednesday, October 5, 2022

Latest Posts

ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ: 13ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.  ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಮತ್ತು ಕಬ್ಬು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ರಕ್ಷಣಾ ಅಧಿಕಾರಿಗಳ ಪ್ರಕಾರ, ಶನಿವಾರ ರಾತ್ರಿ ಲಾಹೋರ್‌ನಿಂದ ಸುಮಾರು 400 ಕಿಮೀ ದೂರದಲ್ಲಿರುವ ರಹೀಮ್ ಯಾರ್ ಖಾನ್ ಜಿಲ್ಲೆಯಲ್ಲಿ ಕಬ್ಬು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ 18 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಅಪಘಾತದ ನಂತರ, ಸ್ಥಳೀಯರು ಮತ್ತು ರಕ್ಷಣಾ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಇನ್ನು ಐವರು ಗಾಯಗೊಂಡಿದ್ದಾರೆ ಅವರ ಸ್ಥಿತಿಯೂ ಚಿಂತಾಜನಕವಾಗಿದೆ. ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ. ಅಪಘಾತದ ನಂತರ ಕಬ್ಬಿನ ಹೊರೆ ಬಸ್ ಮೇಲೆ ಬಿದ್ದ ಪರಿಣಾಮವಾಗಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!