ಮದುವೆ ಬಸ್‌ನಲ್ಲಿ ಅಡಗಿ ಕುಳಿತಿದ್ದ ಜವರಾಯ: ಏಳು ಮಂದಿ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೋಮವಾರ ಮಧ್ಯರಾತ್ರಿ ಪ್ರಕಾಶಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದರ್ಶಿ ಬಳಿ ಸಾಗರ್ ನಾಲೆಗೆ ಮದುವೆ ಬಸ್ಸೊಂದು ಉರುಳಿದ್ದು, ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಪೊಡಿಲಿಯಿಂದ ಕಾಕಿನಾಡಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಸಮಯದಲ್ಲಿ ಸುಮಾರು 40 ಜನರಿದ್ದರೆಂದು ತಿಳಿದುಬಂದಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕ್ರಮ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ದರ್ಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಚಾಲಕನ ನಿದ್ದೆಯಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮದುವೆಯ ಆರತಕ್ಷತೆಗಾಗಿ ಕಾಕಿನಾಡಕ್ಕೆ ಹೋಗಲು ಮದುವೆ ಮನೆಯವರು RTC ಬಸ್ ಅನ್ನು ಬಾಡಿಗೆಗೆ ಪಡೆದರು. ಬಸ್ ಪೊಡಿಲಿಯಿಂದ ಹೊರಟು ಅರ್ಧ ಗಂಟೆಯೊಳಗೆ ಅಪಘಾತ ಸಂಭವಿಸಿದೆ. ಈ ಮಾರಣಾಂತಿಕ ಬಸ್ ಅಪಘಾತದಲ್ಲಿ ಮೃತರೆಲ್ಲರೂ ಪೊಡಿಲಿ ಗ್ರಾಮದವರು ಎಂದು ಪೊಲೀಸರು ಗುರುತಿಸಿದ್ದಾರೆ. ಮೃತರು ಅಜೀಜ್ (65), ಅಬ್ದುಲ್ ಹನಿ (60), ರಮೀಜ್ (48), ಮುಲ್ಲಾ ನೂರ್ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್. ಶಬೀನಾ (35), ಶೇಖ್. ಹಿನಾ (6) ಎಂದು ಗುರುತಿಸಲಾಗಿದೆ.

ಮೃತರಲ್ಲಿ ಚೆನ್ನೈ ಡಿಎಸ್‌ಪಿ ಅವರ ಸಂಬಂಧಿಕರೂ ಸೇರಿದ್ದಾರೆ ಇದೆ ಎಂದು ತಿಳಿದುಬಂದಿದೆ. ಘಟನೆ ಸ್ಥಳದಲ್ಲಿ ಮೃತರ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ. ಆದರೆ, ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಬಸ್ ಅಪಘಾತಕ್ಕೀಡಾದ ಸಾಗರ ನಾಲೆಯಲ್ಲಿ ನೀರು ಹರಿಯುತ್ತಿಲ್ಲ. ಇಲ್ಲದಿದ್ದರೆ ಸಾವಿನ ಸಂಖ್ಯೆ ದೊಡ್ಡ ಪ್ರಮಾಣದಲ್ಲಿರುತ್ತಿತ್ತು ಎನ್ನುತ್ತಾರೆ ಸ್ಥಳೀಯರು. ಜಿಲ್ಲಾ ಎಸ್ಪಿ ಅಪಘಾತ ಸ್ಥಳ ಪರಿಶೀಲನೆ ನಡೆಸಿದರು. ಅಪಘಾತ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!