ಹೊಸದಿಗಂತ, ಮಂಗಳೂರು:
ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ಪರಿಸರದಲ್ಲಿ ನಡೆದ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮಂಜುನಾಥ (36) ಎಂಬವರು ಸಾವನ್ನಪ್ಪಿದ್ದಾರೆ.
ಗದಗ ಜಿಲ್ಲೆ ರೋಣಾ ತಾಲೂಕಿನ ನಿವಾಸಿಯಾಗಿರುವ ಮಂಜುನಾಥ್, ವೃತ್ತಿಯಲ್ಲಿ ಚಾಲಕರಾಗಿದ್ದು, ಪೆರಂಪಳ್ಳಿಯಲ್ಲಿ ವಾಸಿಸುತ್ತಿದ್ದರು. ಇವರು ಸೋಮವಾರ ಸಂಜೆ 5.45ರ ವೇಳೆಗೆ ಸ್ಕೂಟರ್‌ನಲ್ಲಿ ಶ್ರೀ ಆದಿ ಶಕ್ತಿ ದೇವಸ್ಥಾನ ಕ್ರಾಸ್ ದಾಟಿ ಮಣಿಪಾಲ ಕಡೆಗೆ ತೆರಳುತ್ತಿರುವ ವೇಳೆ ಟ್ಯಾಂಕರ್ ಡಿಕ್ಕಿಯಾಗಿದೆ.
ಈ ಸಂದರ್ಭಅವರ ತಲೆಗೆ, ಎದೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಮಂಜುನಾಥ್ ಮೃತಪಟ್ಟಿದ್ದರು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.