Sunday, November 27, 2022

Latest Posts

ವಾರಂಗಲ್‌ನಲ್ಲಿ ರಸ್ತೆ ಅಪಘಾತ: ಮೂವರು ಸಾವು, ಆರು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ. ವರ್ಧನ್ನಪೇಟೆ ಪಟ್ಟಣದ ಉಪನಗರ ಡಿಸಿ ತಾಂಡಾದಲ್ಲಿ ಮಂಗಳವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರನ್ನು ಕೃಷ್ಣಾ ರೆಡ್ಡಿ, ವರಲಕ್ಷ್ಮಿ ಮತ್ತು ವೆಂಕಟಸಾಯಿ ರೆಡ್ಡಿ ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶದ ಒಂಗೋಲ್‌ನಿಂದ ವಾರಂಗಲ್‌ಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!