ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಕರ್ತವ್ಯ ನೀರತ ಪಿಎಸ್ಐ ಸಾವನ್ನಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ.
ಪಿಎಸ್‌ಐ ಕಾರು ನಿಯಂತ್ರಣ ತಪ್ಪಿ ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ, ಅಪಘಾತದ ರಭಸಕ್ಕೆ ಪಿಎಸ್‌ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
ಅಮ್ಮಿನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಅಪಘಾತದಲ್ಲಿ ಸಾವನ್ನಪ್ಪಿದವರು. ಇವರು ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನವಲಗುಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.