Thursday, February 9, 2023

Latest Posts

ಹತ್ರಾಸ್‌ನಲ್ಲಿ ಬೊಲೆರೊ-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ, ಮೂವರ ಸಾವು: ಯೋಗಿ ಆದಿತ್ಯಾನಾಥ್‌ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಭಾನುವಾರ ತಡರಾತ್ರಿ ಮಾರುತಿ ಬೊಲೆರೊ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಅಲಿಗಢ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಹತ್ರಾಸ್‌ನ ಮಥುರಾ-ಬರೇಲಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿ ವೃಂದಾವನದಿಂದ ಹಿಂತಿರುಗುತ್ತಿದ್ದ ಆರು ಮಂದಿ ಬೊಲೆರೊದಲ್ಲಿದ್ದು, ಮುರ್ಸಾನ್‌ನಲ್ಲಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಮೃತರನ್ನು ಹರ್ಷ ಚೌಧರಿ (20), ದೀಪಕ್ (18) ಮತ್ತು ಕೃಷ್ಣ (22) ಎಂದು ಗುರುತಿಸಲಾಗಿದೆ.

ಮೃತರನ್ನು ಗುರುತಿಸಿ ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ರಸ್ತೆ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಹಾಗೆಯೇ ಸ್ಥಳದಲ್ಲೇ ಪರಿಹಾರ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!