Tuesday, July 5, 2022

Latest Posts

ಅಯೋಧ್ಯೆ ರಾಮಜನ್ಮಭೂಮಿಗೆ ತೆರಳುವ ರಸ್ತೆಗೆ ಯುಪಿ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೆಸರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಯೋಧ್ಯೆ ರಾಮ ಜನ್ಮಭೂಮಿಗೆ ಹೋಗುವ ರಸ್ತೆಗೆ ಯುಪಿ ಮಾಜಿ  ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ, ಅಯೋಧ್ಯೆಯಲ್ಲಿ ರಾಮಜನ್ಮಭೂಮಿಗೆ ಹೋಗುವ ರಸ್ತೆಗೆ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು, ಅಷ್ಟೇ ಅಲ್ಲ ಲಕ್ನೋ, ಪ್ರಯಾಗ್‌ರಾಜ್, ಬುಲಂದರ್‌ಶಹರ್ ಮತ್ತು ಅಲಿಗಢದ ಒಂದು ರಸ್ತೆಗೆ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು. ಅಗಲಿದ ನಾಯಕನಿಗೆ ಇದು ನಮ್ಮ ಗೌರವ ಎಂದಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮತ್ತು ಯುಪಿ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರು ಶನಿವಾರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss