ರಸ್ತೆ ಬದಿ ನಿಲ್ಲಿಸಿದ್ದ ಕಾರಿನಡಿಯಲ್ಲಿ ನವಜಾತ ಶಿಶು ಪತ್ತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರ ನೋಡಿದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಸಂದರ್ಭ ಒಂದು ದಿನದ ಮಗು ಎಂಬುದು ತಿಳಿದುಬಂದಿದ್ದು, ಉಳ್ಳಾಲ ಪೊಲೀಸರು ವಿವಿಧ ಆಸ್ಪತ್ರೆಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.

ಸದ್ಯ ಮಗುವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!