Thursday, March 30, 2023

Latest Posts

ಮಾ.12ರಂದು ಪ್ರಧಾನಿ ನರೇಂದ್ರಮೋದಿಯವರಿಂದ ಮಂಡ್ಯದಲ್ಲಿ ರೋಡ್‌ಶೋ

ಹೊಸದಿಗಂತ ವರದಿ ಮಂಡ್ಯ :

ಪ್ರಧಾನಿ ನರೇಂದ್ರಮೋದಿ ಮಾ.12ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಮಂಡ್ಯ ಜಿಲ್ಲೆ ಹಾಗೂ ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ಪ್ರವಾಸ ಕಾರ್ಯಕ್ರಮ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಮೋದಿ, ಪಿಇಎಸ್ ಕಾಲೇಜಿನಿಂದ ಗೆಜ್ಜಲಗೆರೆಯವರೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಗೆಜ್ಜಲಗೆರೆಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ವೇದಿಕೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದರು.

ಪ್ರಧಾನಿ ಮೋದಿ ಅವರನ್ನು ನೋಡಲು ಜಿಲ್ಲಾದ್ಯಂತ ಲಕ್ಷಾಂತರ ಮಂದಿ ಜನರು ಕಾತರರಾಗಿದ್ದಾರೆ. ಪ್ರತಿಯೊಂದು ಹಳ್ಳಿಯಿಂದಲೂ ಮೋದಿ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಚುನಾವಣೆ ಉದ್ದೇಶದಿಂದ ಮಾತ್ರವೇ ಬರುತ್ತಿದ್ದಾರೆ ಎನ್ನುವುದು ಸುಳ್ಳು. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಆಗಮಿಸುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಕ್ಸ್‌ಪ್ರೆಸ್ ಹೆದ್ದಾರಿಯಿಂದ ಜನರಿಗೆ ಬಹಳಷ್ಟು ಅನುಕೂಲವಾಗಿದೆ. ಕೇವಲ 50 ನಿಮಿಷದಲ್ಲಿ ಬೆಂಗಳೂರಿನಿಂದ ಮೈಸೂರು ತಲುಪಬಹುದಾಗಿದ್ದು, ಇದಕ್ಕೆ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!