ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಹಠಾತ್ ಮಳೆಯಾಗಿದ್ದು, ಸಿಡಿಲು, ಮಿಂಚಿನ ಅಬ್ಬರಕ್ಕೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕ ಮೃತಪಟ್ಟಿದ್ದಾರೆ.
ಗಡಿಯಾರ ನಿವಾಸಿ ಸುಭೋದ್ ಸಿ (14) ಎಂಬ ಬಾಕಲನಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, ಕೂಡಲೇ ಅತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅತನನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.