ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೇ ಕದ್ದ ಖದೀಮರು !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ‌ಸಂಸ್ಥೆಗೆ(ಕೆಕೆಆರ್‌ಟಿಸಿ) ಸೇರಿದ್ದ ಬಸ್ಸನ್ನು ಕಳ್ಳತನ ಮಾಡಿರುವ ವಿಚಿತ್ರ ಘಟನೆ ಸೋಮವಾರ ತಡರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ನಡೆದಿದೆ.

ಬೀದರ್ ಬಸ್ ಡಿಪೋ- 2ಗೆ ಸೇರಿದ ಕೆಎ 38 ಎಫ್ 971 ಸಂಖ್ಯೆಯ ಬಸ್ಸನ್ನು ಕಳ್ಳರು ಕದ್ದೊಯ್ದಿದ್ದಾರೆ.

ಸೋಮವಾರ ಬೆಳಿಗ್ಗೆ ಸುಮಾರು 3:30ರ ವೇಳೆಗೆ ಖದೀಮರು ಕಳ್ಳತನ ಮಾಡಿದ್ದು, ಕದ್ದ ಬಸ್ಸನ್ನು ಮಿರಿಯಾಣ ಮಾರ್ಗವಾಗಿ ತಾಂಡೂರು ಮೂಲಕ ತೆಲಂಗಾಣದ ಕಡೆಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಬಸ್ ಹುಡುಕಾಟಕ್ಕಾಗಿ ಎರಡು ಪೊಲೀಸ್ ತಂಡಗಳು ತೆಲಂಗಾಣಕ್ಕೆ ತೆರಳಿವೆ. ಸ್ಥಳಕ್ಕೆ ಚಿಂಚೋಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!