January17, 2026
Saturday, January 17, 2026
spot_img

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ: ಎಷ್ಟು ಹಣ ದೋಚಿದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಸೇರುವಂತಾಗಿದ್ದು, ಇಂತಹ ಸಂದರ್ಭದಲ್ಲಿ ದರ್ಶನ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ವಿಜಯಲಕ್ಷ್ಮೀ ಮನೆಯಿಂದ ಸುಮಾರು 3 ಲಕ್ಷ ರೂ. ನಗದು ಕಳುವಾಗಿದ್ದು, ಈ ಕುರಿತು ಸ್ಥಳೀಯ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯಲಕ್ಷ್ಮಿಯ ಮ್ಯಾನೇಜರ್ ನಾಗರಾಜ್ ಅವರಿಂದ ದಾಖಲಾಗಿರುವ ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮನೆಯಲ್ಲಿ ಕೆಲಸ ಮಾಡುವವರ ಮೇಲೆ ಅನುಮಾನ ವ್ಯಕ್ತಪಡಿಸಿರುವ ವಿಜಯಲಕ್ಷ್ಮೀ, ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಆರೋಪ ಹೊರಹಾಕಿದ್ದಾರೆ. ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಶೀಘ್ರದಲ್ಲೇ ವಿಚಾರಣೆ ನಡೆಸಿ ಕಳ್ಳತನದ ನಿಜಾಸ್ತಿತಿ ಪತ್ತೆಹಚ್ಚುವ ಕಾರ್ಯ ಚುರುಕುಗೊಳಿಸಿದ್ದಾರೆ.

ದರ್ಶನ್ ಜೈಲು ಸೇರಿರುವ ಹಿನ್ನಲೆಯಲ್ಲಿ ವಿಜಯಲಕ್ಷ್ಮೀ ಈಗಾಗಲೇ ಮಾನಸಿಕ ಒತ್ತಡದಲ್ಲಿದ್ದರು. ದರ್ಶನ್ ಬಿಡುಗಡೆಗಾಗಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಾ ಬಂದಿದ್ದ ಅವರು, ಹೈಕೋರ್ಟ್ ನೀಡಿದ ಜಾಮೀನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಹಿನ್ನೆಲೆಯಲ್ಲಿ ಮತ್ತೆ ನಿರಾಶೆಗೆ ಒಳಗಾಗಿದ್ದರು. ಇಂತಹ ಸಂದರ್ಭದಲ್ಲಿ ಮನೆ ಕಳ್ಳತನ ಪ್ರಕರಣ ನೋವನ್ನು ಇನ್ನಷ್ಟು ಹೆಚ್ಚಿಸಿದೆ.

Must Read

error: Content is protected !!