ಹೊಸದಿಗಂತ ವರದಿ, ಹಾಸನ:
ದೇವಾಲಯದ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಭವಾನಿಶಂಕರ ದೇವಾಲಯದಲ್ಲಿ ಗುರುವಾರ ರಾತ್ರಿ ಕಳ್ಳತನವಾಗಿದೆ. ದೇವಾಲಯದ ಬಾಗಿಲ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಅರಸೀಕೆರೆ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.