ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುತ್ತೂರಿನ ವಿಟ್ಲ ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿ ದರೋಡೆ ನಡೆಸಿದ ಪ್ರಕರಣದಲ್ಲಿ ಭಾಗಿಯಾದ ಕೇರಳ ಪೊಲೀಸ್ ಎ.ಎಸ್.ಐ. ಸಹಿತ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಹಣ ಕೇಳಿದ್ದಕ್ಕೆ ನೀಡಿದ ಹಿನ್ನಲೆಯಲ್ಲಿ ಸಿಟ್ಟಿಗೊಂಡು ದರೋಡೆ ಕೃತ್ಯ ನಡೆಸಲಾಗಿದೆ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.
ದರೋಡೆ ಕೃತ್ಯ ಮೂಲ ಸೂತ್ರದಾರನಾದ ಕೊಡಂಗಲ್ಲೂರು ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಶಫೀರ್ ಬಾಬು (೪೮), ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್ (೩೭), ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (೩೮), ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (೨೭) ಎಂಬವರನ್ನು ಬಂಧಿಸಲಾಗಿದೆ.
ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಜ.೩ ರಂದು ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಯಲ್ಲಿ ನಡೆದ ದರೋಡೆಗೆ ಸಂಬಂಧಿಸಿದಂತೆ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡಿಸ್, ಸಚಿನ್ ಮತ್ತು ಶಬಿನ್ ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಇಡಿ ಅಧಿಕಾರಿಯಂತೆ ನಟಿಸಿದ ಪ್ರಮುಖ ವ್ಯಕ್ತಿಗೆ ಶೋಧ ನಡೆಯುತ್ತಿದೆ.