ಶಿರಾಡಿ ಘಾಟ್ ಪರಿಸರದಲ್ಲಿ ಗುಡ್ಡೆ ಕುಸಿತ: ಮಂಗಳೂರು-ಬೆಂಗಳೂರು ವಾಹನ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ವರದಿ,ಮಂಗಳೂರು:

ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ೭೫ ರ ಬೆಂಗಳೂರು – ಮಂಗಳೂರು ನಡುವಣ ಶಿರಾಡಿ ಘಾಟ್ ಪರಿಸರದ ಕೆಲವೆಡೆ ಗುಡ್ಡೆ ಕುಸಿತದಿಂದ ವಾಹನ ಸಂಚಾರದಲ್ಲಿ ವ್ಯತ್ಯಯವುಂಟಾಗಿದ್ದು, ಪರ್ಯಾಯ ರಸ್ತೆಯ ಮೂಲಕ ವಾಹನ ಸಂಚಾರವನ್ನು ಮುಂದುವರೆಸಲಾದ ಘಟನೆ ಬುಧವಾರ ನಡೆದಿದೆ.

ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಅಲ್ಲಲ್ಲಿ ಭೂ ಕುಸಿತ ಆರಂಭವಾಗಿದ್ದು , ಅಪಾಯದ ಮಟ್ಟವನ್ನು ಅವಲೋಕಿಸಿದ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಲಘು ವಾಹನಗಳಿಗೆ ಬದಲಿ ಮಾರ್ಗ ತೋರಿಸಲಾಗಿದೆ. ಭಾರೀ ಮಳೆಯಿಂದ ಘನ ವಾಹನಗಳನ್ನು ಹೆದ್ದಾರಿಯಲ್ಲೇ ಸಂಚಾರಕ್ಕೆ ಅನುವು ಮಾಡಿದ್ದು ಲಘು ವಾಹನಗಳನ್ನು ಕಾಡ ಮನೆ ಎಸ್ಟೇಟ್ ಮೂಲಕ ಹಾದು ಹೋಗಬೇಕಾದ ಅನಿವಾರ್ಯತೆ ಮೂಡಿದೆ.

ಸಕಲೇಶಪುರ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಪೋಲಿಸರು ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಪರಿಸ್ಥಿತಿಗೆ ಅನುಗುಣವಾಗಿ ವಾಹನ ಸಂಚಾರವನ್ನು ನಿಭಾಯಿಸುತ್ತಿದ್ದಾರೆ. ಈ ಮಧ್ಯೆ ಹೆದ್ದಾರಿ ಪಾರ್ಶ್ವದ ಬೆಟ್ಟ ಗುಡ್ಡಗಳಲ್ಲಿ ಜರಿತ ಕಂಡು ಬಂದಿದ್ದು, ಅಪಾಯದ ಭೀತಿಯನ್ನು ಎದುರಿಸಿಕೊಂಡೇ ವಾಹನವನ್ನು ಚಲಾಯಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!