ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈ ದಿನ ‘ಟಾಕ್ಸಿಕ್’ ಸಿನಿಮಾದ ಯಶ್ ಅವರ ಪೋಸ್ಟರ್ ಬಿಡುಗಡೆ ಆಗಲಿದೆ.
ಈಗಾಗಲೇ ನಾಳೆ (ಜನವರಿ 08) ಯಶ್ ಅವರ ಪೋಸ್ಟರ್ ಬಿಡುಗಡೆ ಆಗಲಿರುವ ಮಾಹಿತಿಯನ್ನು ಕೆವಿಎನ್ ಪ್ರೊಡಕ್ಷನ್ಸ್ ಹಂಚಿಕೊಂಡಿದೆ. ಇದೀಗ ಯಶ್ ಅವರು ತಮ್ಮ ಬರ್ತ್‌ಡೇ ನಿಮಿತ್ತ ಫ್ಯಾನ್ಸ್‌ಗೆ ಪತ್ರ ಬರೆದಿದ್ದಾರೆ.
ಈ ಬಾರಿ ಕೂಡ ಅವರು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಲು ಸಾಧ್ಯವಾಗುತ್ತಿಲ್ಲ. ‘ನನ್ನ ಪ್ರೀತಿಯ ಅಭಿಮಾನಿಗಳೇ, ನಿಜ ಹೇಳಬೇಕೆಂದರೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಎಷ್ಟು ಕಾಯುತ್ತಿದ್ದೀರಿ ಎಂದು ನನಗೆ ಚೆನ್ನಾಗಿ ತಿಳಿದಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೆ’ ಎಂದು ಯಶ್ ಅವರು ಬರಹ ಆರಂಭಿಸಿದ್ದಾರೆ.
ಯಶ್ ಪತ್ರದಲ್ಲಿ ಏನಿದೆ?
ನನ್ನ ಪ್ರೀತಿಯ ಅಭಿಮಾನಿಗಳಿಗೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಹೇಗೆ ಕಾಯುತ್ತಿದ್ದೀರಿ ಎಂದು ನನಗೆ ಪ್ರಾಮಾಣಿಕವಾಗಿ ತಿಳಿದಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೆನೆ.

ಈ ವರ್ಷ ನನ್ನ ಹುಟ್ಟುಹಬ್ಬದಂದು ನಿಮ್ಮನ್ನು ಭೇಟಿ ಆಗಬೇಕು ಎಂದು ಬಯಸಿದ್ದೆ, ಆದರೆ ಮಾರ್ಚ್ 19, 2026 ರಂದು ಚಿತ್ರಮಂದಿರಗಳಲ್ಲಿ ನಿಮಗಾಗಿ ಸಿದ್ಧವಾಗುವ ಚಿತ್ರವನ್ನು ಪೂರ್ಣಗೊಳಿಸುವಲ್ಲಿ ನಾನು ಸಂಪೂರ್ಣವಾಗಿ ಮಗ್ನನಾಗಿದ್ದೇನೆ. ಈ ಕಾರಣದಿಂದಾಗಿ, ನಾನು ಇನ್ನೂ ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಶೀಘ್ರದಲ್ಲೇ ಇನ್ನೂ ದೊಡ್ಡ ಮಟ್ಟದಲ್ಲು ನಿಮ್ಮನ್ನು ಭೇಟಿಯಾಗುತ್ತೇನೆ. ಈ ಮಧ್ಯೆ, ನಾನು ನಿಮ್ಮೆಲ್ಲರ ಶುಭಾಶಯಗಳನ್ನು ವೈಯಕ್ತಿಕವಾಗಿ ಕೇಳಿಕೊಳ್ಳುತ್ತೇನೆ ಮತ್ತು ನೀವು ಕಳುಹಿಸುವ ಪ್ರತಿಯೊಂದು ಪ್ರೀತಿಯನ್ನು ಪಾಲಿಸುತ್ತೇನೆ ಎಂದು ಯಶ್ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
ಟಾಕ್ಸಿಕ್ ಸಿನಿಮಾ ಬಿಗ್ ಅಪ್‌ಡೇಟ್
ನಾಳೆ (ಜನವರಿ 08) ಯಶ್ ಅವರ ಪೋಸ್ಟರ್ ಬಿಡುಗಡೆ ಆಗಲಿರುವ ಮಾಹಿತಿಯನ್ನು ಕೆವಿಎನ್ ಪ್ರೊಡಕ್ಷನ್ಸ್ ಹಂಚಿಕೊಂಡಿದ್ದು, ‘ಯಾರ ಬಗ್ಗೆ ಅವರು ಎಚ್ಚರಿಸಿದ್ದರೊ ಆತನ ಅನಾವರಣ ಆಗಲಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ನಾಳೆ (ಜನವರಿ 08) ಬೆಳಿಗ್ಗೆ 10 ಗಂಟೆ 10 ನಿಮಿಷಕ್ಕೆ ಯಶ್ ಅವರ ಪಾತ್ರದ ಪೋಸ್ಟರ್ ಬಿಡುಗಡೆ ಆಗಲಿದೆ. ಅಭಿಮಾನಿಗಳು ಸಖತ್ ಸ್ಟೈಲಿಷ್ ಮತ್ತು ಮಾಸ್ ಆಗಿರುವ ಪೋಸ್ಟರ್ ಅನ್ನು ನಿರೀಕ್ಷೆ ಮಾಡುತ್ತಿದ್ದಾರೆ.

